ಬೆಂಗಳೂರು:- ನಗರದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಟೋ ರಿಕ್ಷಾಗೆ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
Advertisement
ಹೊಸಕೋಟೆಯಿಂದ ಕೆಆರ್ ಪುರಂ ಮಾರ್ಗವಾಗಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ಸಿಗದೇ ಮುಂದೆ ಹೋಗುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಆಟೋದಲ್ಲಿ ಮಗು ಕೂಡಾ ಇದ್ದು, ತರಚಿದ ಗಾಯಗಳಿಂದ ಬಚಾವ್ ಆಗಿದೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.