ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕಳೆದ 2 ತಿಂಗಳ ಹಿಂದೆ ಪಟ್ಟಣದ ದೂದನಾನಾ ದರ್ಗಾ ಬಳಿ ಆಟೋಸ್ಟಾಂಡ್‌ನಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಕಳ್ಳತನವಾದ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಅಟೋರಿಕ್ಷಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗುರುವಾರ ಡಿಎಸ್‌ಪಿ. ಜೆ.ಎಚ್. ಇನಾಮದಾರ ಅವರು ಈ ಬಗ್ಗೆ ಮಾಹಿತಿ ನೀಡಿ, ಸಿಬ್ಬಂದಿಗಳ ಚಾಣಾಕ್ಷತನದಿಂದ ಕಳ್ಳನನ್ನು ಬಂಧಿಸಲಾಗಿದ್ದು, ಅಟೋರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಬಿ. ಸಂಕದ, ಡಿಎಸ್‌ಪಿ ಜೆ.ಎಚ್. ಇನಾಮದಾರ ಇವರ ಮಾರ್ಗದರ್ಶನದಲ್ಲಿ ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ಈರಪ್ಪ ರಿತ್ತಿ, ಅಪರಾಧ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ ನೇತೃತ್ವದ ತಂಡ ಪತ್ತೆ ಕಾರ್ಯ ಕಾರ್ಯಕೈಗೊಂಡಿದ್ದರು ಎಂದು ತಿಳಿಸಿದರು.
ಈ ಸಂಬಂಧ ಗದಗ ನಿವಾಸಿ ಸದ್ದಾಂ ಇಮಾಮ ಹುಸೇನ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆರೋಪಿಯಿಂದ 1.50ಲಕ್ಷ ಕಿಮ್ಮತ್ತಿನ ಆಟೋ ರಿಕ್ಷಾ ವಶಪಡಿಸಿಕೊಂಡಿದ್ದಾರೆ. ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಎಎಸ್‌ಐಗಳಾದ ಎನ್.ಎ. ಮೌಲ್ವಿ, ಗುರು ಬೂದಿಹಾಳ, ಸಂಜು ಕೊರಡೂರ, ಆರ್.ಎಸ್. ಯರಗಟ್ಟಿ, ಎಮ್.ಎ. ಶೇಖ, ಎಚ್.ಎಸ್. ಬಳ್ಳಾರಿ, ಆನಂದ ಕಮ್ಮಾರ, ಸಿ.ಎಸ್. ಮಠಪತಿ, ಡಿ.ಎಸ್. ನದಾಫ್, ಎಚ್.ಐ. ಕಲ್ಲಣ್ಣವರ, ಪಾಂಡುರಂಗರಾವ, ಮದುಚಂದ್ರ ಧಾರವಾಡ, ಅಪ್ಪಣ್ಣ ರಾಠೋಡ, ತಾರಿಕೊಪ್ಪ ಇವರುಗಳ ಕಾರ್ಯಕ್ಕೆ ಎಸ್‌ಪಿ ಬಿ.ಎಸ್. ನೇಮಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.