Gadaga: ಕಂದಕಕ್ಕೆ ಉರುಳಿದ ಆಟೋ; ಚಾಲಕ ಸಾವು, 6 ಮಂದಿಗೆ ಗಾಯ!

0
Spread the love

ಗದಗ:- ದೇವರ ದರ್ಶನ ಪಡೆದು ಮರಳಿ ಹೋಗುವ ವೇಳೆ ಆಟೋ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಜರುಗಿದೆ.

Advertisement

ಕೊಪ್ಪಳ ಜಿಲ್ಲೆಯ ನೇಲುವಿಗಿಪೂರ ಮೂಲದ ಪ್ರಭುಲಿಂಗ ಹಿರೇಮಠ(28) ಮೃತ ದುರ್ದೈವಿ. ಘಟನೆಯಿಂದ ಆರು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತರು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಆಟೋದಲ್ಲಿದ್ದ ಆರು ಜನರಿಗೆ ಗಾಯಗಳಾಗಿವೆ. ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here