ಉತ್ತರಾಖಂಡದ ಚಮೋಲಿಯಲ್ಲಿ ಹಿಮಕುಸಿತ: ನಾಲ್ವರು ಸಾವು, 5 ಜನರು ನಾಪತ್ತೆ!

0
Spread the love

ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಫೋಟ ಸಂಭವಿಸಿ 4 ಜನರು ಮೃತಪಟ್ಟಿದ್ದಾರೆ, ಹಾಗೂ 5 ಜನರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ಅಗತ್ಯ ನೆರವಿನ ಭರವಸೆಯನ್ನೂ ನೀಡಿದ್ದಾರೆ.

Advertisement

ಗಾಯಗೊಂಡಿದ್ದ ಕಾರ್ಮಿಕರು ಜೋಶಿಮಠದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಮದಡಿ ಒಟ್ಟು 55 ಕಾರ್ಮಿಕರು ಸಿಲುಕಿದ್ದರು.

ಇದುವರೆಗೆ 50 ಜನರನ್ನು ರಕ್ಷಣೆ ಮಾಡಿದ್ದು, ಬಾಕಿ ಐದು ಜನರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲು ಆರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಸ್ಥಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here