ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಮುಖ್ಯಾಧಿಕಾರಿಗಳು ಮಂಗಳವಾರ ಸ್ಥಳೀಯ ಹೀರಾ ವೈನ್ ಶಾಪ್ ಮತ್ತು ವಿಶಾಲ ಬಾರ್‌ಗಳಿಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸಹಕಾರದಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಗ್ಲಾಸ್‌ಗಳನ್ನು ಬಳಸದಂತೆ ಎಚ್ಚರಿಕೆ ನೀಡಿ, ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಜಪ್ತಿ ಕೈಗೊಂಡಿರು.
ಈ ವೇಳೆ ಪ.ಪಂ ಅಧ್ಯಕ್ಷ ಫಕೀರಪ್ಪ ಮಳ್ಳಿ ಮಾತನಾಡಿ, ಈ ಎರಡೂ ಬಾರ್‌ಗಳು ಮುಖ್ಯ ರಸ್ತೆಯ ಪಕ್ಕದಲ್ಲಿ ಇರುವುದರಿಂದ ಸಾರಾಯಿ ಕುಡಿದ ಪ್ಲಾಸ್ಟಿಕ್ ಗ್ಲಾಸ್‌ಗಳು ಎಲ್ಲೆಂದರಲ್ಲಿ ಹರಡುತ್ತಿದೆ. ಇದರಿಂದ ಅಕ್ಕಪಕ್ಕದ ಮನೆಯವರಿಗೆ ಸಾಕಷ್ಟು ತೊಂದರೆಯಾಗತ್ತಿದೆ. ಆದ್ದರಿಂದ ಈ ಎರಡು ಮದ್ಯದಂಗಡಿ ಮಾಲೀಕರಿಗೆ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಲಾಗಿದೆ ಎಂದರು.
ಮುಖ್ಯಾಧಿಕಾರಿ ಮಹೇಶ ನಿಡಶೇಶಿ ಮಾತನಾಡಿ, ಈಗಾಗಲೇ ಪಟ್ಟಣ ಪಂಚಾಯಿತಿಯಿಂದ ದಿನಸಿ ಅಂಗಡಿ, ತರಕಾರಿ ಅಂಗಡಿ ಹಾಗೂ ಹೋಟಲ್‌ಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸದಂತೆ ಸೂಚಿಸಲಾಗಿದೆ. ಈ ಎರಡು ಬಾರ್‌ಗಳ ಪಕ್ಕದಲ್ಲಿ ಮನೆಗಳು ಮತ್ತು ದೇವಸ್ಥಾನಗಳಿದ್ದು, ಭಕ್ತರಿಗೆ ಸಾಕಷ್ಟು ಸಮಸ್ಯೆ ಎದುರಾಗುತ್ತಿದೆ ಎಂದು ಸಾರ್ವಜನಿಕರು ಕಚೇರಿಗೆ ದೂರು ನೀಡಿದ್ದರು. ಆದ್ದರಿಂದ ನಾವು ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯ ಹೀರಾ ವೈನ್ಸ್ ಮತ್ತು ವಿಶಾಲ ಬಾರ್‌ಗಳಿಗೆ ಭೇಟಿ ನೀಡಿ ಮಾಲೀಕರಿಗೆ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಅವರಲ್ಲಿದ್ದ, ಪ್ಲಾಸ್ಟಿಕ್ ಗ್ಲಾಸ್‌ಗಳನ್ನು ಜಪ್ತಿ ಕೂಡ ಮಾಡಲಾಗಿದೆ ಎಂದರು.
ಪ.ಪಂ ಸಿಬ್ಬಂದಿ ಶಂಕ್ರಪ್ಪ ದೊಡ್ಡಣ್ಣವರ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದ್ದರು.