ಸಾಧಕರಿಗೆ ಪ್ರಶಸ್ತಿ ಪ್ರದಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಡಾ. ವಿ.ಬಿ. ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವರ ನೇತೃತ್ವದಲ್ಲಿ ನಡೆದ ಗಾನಯೋಗಿ ಶ್ರೀ ಪುಟ್ಟರಾಜ ಗವಾಯಿಗಳ 111ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಶ್ರೀ ಪರಮ ಪೂಜ್ಯ ಮೌನ ತಪಸ್ವಿಗಳಾದ ಶ್ರೀ ವೀರೇಶ್ವರ ಶಿವಯೋಗಿಗಳು ಅನ್ನದಾನೇಶ್ವರ ಸಂಸ್ಥಾನ ಮಠ ನರಸಾಪುರ ಗದಗ ಇವರಿಗೆ ಗ್ರಂಥ ತುಲಾಭಾರ, ರಾಜ್ಯದ ವಿವಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Advertisement

ಡಾ. ವಿ.ವಿ. ಹಿರೇಮಠ ಅವರ ನಿವಾಸದ ಸಭಾ ಭವನದಲ್ಲಿ ಶಿಗ್ಗಾಂವಿ ತಾಲೂಕಿನ ಕುನ್ನೂರ ಪ್ಲಾಟ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಗಾಯತ್ರಿ ಎಲ್.ರಾಠೋಡ್ ಅವರಿಗೆ `ಶ್ರೀ ಪುಟ್ಟರಾಜ ಗವಾಯಿಗಳ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾಡಿನ ಹೆಸರಾಂತ ಕವಿಗಳು, ಸಾಹಿತ್ಯಕಾರರು, ಸಾಮಾಜಿಕ ಚಿಂತಕರು, ನಾಡಿನ ವಿವಿಧ ಕ್ರೇತ್ರದಲ್ಲಿ ಸಾಧನೆ ಮಾಡಿದ ಹಲವು ಸಾಧಕರಿಗೆ ಸನ್ಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಪುಟ್ಟರಾಜ ವ್ಹಿ.ಹಿರೇಮಠ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here