ಜಾನೋಪಂತರ ಕ್ರಿಕೆಟ್ ಅಕಾಡೆಮಿಗೆ ಪ್ರಶಸ್ತಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಹುಬ್ಬಳ್ಳಿಯ ಬಿ.ಜಿ ಮೈದಾನದಲ್ಲಿ ಆಹ್ವಾನಿತ ತಂಡಗಳಿಗಾಗಿ ನಡೆದ 16 ವರ್ಷದೊಳಗಿನ ಕ್ರಿಕೆಟ್ ಟೂರ್ನಿಯಲ್ಲಿ ಗದುಗಿನ ಜಾನೋಪಂತರ ಕ್ರಿಕೆಟ್ ಅಕಾಡೆಮಿ ತಂಡವು ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

Advertisement

ಈ ಟೂರ್ನಿಯನ್ನು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿತ್ತು. ಹುಬ್ಬಳ್ಳಿ-ಧಾರವಾಡ, ಗದಗ, ಅಂಕಲಿ, ಹಾವೇರಿ ಹಾಗೂ ರಾಣೇಬೆನ್ನೂರಿನ ಒಟ್ಟು 8 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಗದಗ ಜಾನೋಪಂತರ ಕ್ರಿಕೆಟ್ ಅಕಾಡೆಮಿ ತಂಡವು ಹುಬ್ಬಳ್ಳಿಯ ಕೆ.ಎಲ್.ಇ. ಹೈಸ್ಕೂಲಿನ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.


Spread the love

LEAVE A REPLY

Please enter your comment!
Please enter your name here