• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಾಧಕರಿಗೆ ಜಿಲ್ಲಾಡಳಿತದಿಂದ ಸನ್ಮಾನ

Vijaya Sakshi News Desk by Vijaya Sakshi News Desk
January 27, 2025
in Gadag News
ಸಾಧಕರಿಗೆ ಜಿಲ್ಲಾಡಳಿತದಿಂದ ಸನ್ಮಾನ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: 76ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸೇರಿದಂತೆ ಗಣ್ಯರು ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಾಂಸ್ಕೃತಿಕ, ಜಾನಪದ, ಶಿಲ್ಪಕಲೆ, ವೈದ್ಯಕೀಯ ಮತ್ತು ಆಡಳಿತ ಕ್ಷೇತ್ರ: 2024ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ನಗರದ ರೇಣುಕಾ ಹಾಸ್ಪಿಟಲ್‌ನ ಡಾ. ಜಿ.ಬಿ. ಬೀಡನಾಳ, 2024ರ ಸುವರ್ಣ ಸಂಭ್ರಮ-50ರ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಜಿಲ್ಲೆಯ ಕಳಸಾಪುರದ ಸುರೇಶ ಠಾಕರಪ್ಪ ಲಮಾಣಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ಕೊಡಮಾಡುವ 2022ರ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಲಕ್ಕುಂಡಿಯ ವೀರಭದ್ರಪ್ಪ ಕಾಳಪ್ಪ ಕವಲೂರು, ಮಲ್ಲಿಕಾರ್ಜುನ ಮನ್ಸೂರ ಟ್ರಸ್ಟ್ ಧಾರವಾಡ ವತಿಯಿಂದ ರಾಷ್ಟ್ರೀಯ ಯುವ ಪ್ರಶಸ್ತಿ ಪಡೆದಿದ್ದಕ್ಕಾಗಿ ಕೆ.ಕೆ.ಪಿ.ಪಿ.ಜಿ ಸಂಗೀತ ಮಹಾವಿದ್ಯಾಲಯದ ಪಂ.ವೆಂಕಟೇಶ ಅಲ್ಕೋಡ, ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಖ್ಯಾತ ವಯೋಲಿನ್ ವಾದಕರಾದ ನಾರಾಯಣ ಹಿರೇಕೊಳಜಿ, ಸರ್ಕಾರಿ ಸೇವೆಯಲ್ಲಿ ಉತ್ತಮ ಕಾರ್ಯನಿರ್ವಹಣೆಗಾಗಿ ಎಚ್.ಆರ್. ಪಾಟೀಲ, ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಮೇಲ್ವಿಚಾರಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ನಗರದ ಜಿಲ್ಲಾ ಆಸ್ಪತ್ರೆಯ ಮಲ್ಲಪ್ಪ ಭಾವಿಮನಿ ಅವರನ್ನು ಸನ್ಮಾನಿಸಲಾಯಿತು.

ಮಾಧ್ಯಮ ವಿಭಾಗ: ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದಕ್ಕಾಗಿ ಕಿತ್ತೂರ ಕರ್ನಾಟಕ ದಿನಪತ್ರಿಕೆಯ ವರದಿಗಾರ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ವಿಜಯವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಶಿವಾನಂದ ಹಿರೇಮಠ, ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಯ ವರದಿಗಾರರಾದ ರಘೋತ್ತಮ ಕೊಪ್ಪರ, ಪ್ರಜಾ ಟಿವಿ ಜಿಲ್ಲಾ ವರದಿಗಾರ ಶರಣು ದೊಡ್ಡೂರು, ಸುವರ್ಣ ಟಿವಿ ಕ್ಯಾಮರಾಮನ್ ಲಿಂಗರಾಜ್ ಎಂ.ಆರ್., ನವೋದಯ ದಿನಪತ್ರಿಕೆಯ ವರದಿಗಾರ ಹನುಮಾನ್ ಸಿಂಗ್ ಜಮಾದಾರ, ರೋಣ ತಾಲೂಕಿನ ವಿಜಯವಾಣಿ ದಿನಪತ್ರಿಕೆಯ ವರದಿಗಾರ ಬಸವರಾಜ ಪಟ್ಟಣಶೆಟ್ಟಿ, ನರಗುಂದ ತಾಲೂಕಿನ ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರ ಸಿ.ಬಿ. ಸುಬೇದಾರ, ಲಕ್ಮೇಶ್ವರ ತಾಲೂಕಿನ ಪ್ರಜಾವಾಣಿ ದಿನಪತ್ರಿಕೆಯ ವರದಿಗಾರ ನಾಗರಾಜ ಹಣಗಿ, ಮುಂಡರಗಿ ತಾಲೂಕಿನ ನಾಗರಿಕ ದಿನಪತ್ರಿಕೆ ವರದಿಗಾರ ಕವಿ ಬಂಕಾಪುರ, ಶಿರಹಟ್ಟಿ ತಾಲೂಕಿನ ಉದಯವಾಣಿ ವರದಿಗಾರ ಜಿ.ಬಿ. ಹೆಸರೂರ, ಮುಳಗುಂದದ ನವೋದಯ ದಿನಪತ್ರಿಕೆಯ ವರದಿಗಾರ ಮಹೇಶ ನೀಲಗುಂದ, ಗಜೇಂದ್ರಗಡ ತಾಲೂಕಿನ ಕನ್ನಡಪ್ರಭ ದಿನಪತ್ರಿಕೆಯ ವರದಿಗಾರ ಎಸ್.ಎಂ. ಸೈಯದ್ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಣ, ಸ್ಪರ್ಧೆ ಮತ್ತು ಸಾಮಾಜಿಕ ಕ್ಷೇತ್ರ: ಸಾಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಲಕ್ಮೇಶ್ವರದ ಕರಿಯಪ್ಪ ನೀಲಪ್ಪ ಶಿರಹಟ್ಟಿ, ಶೈಕ್ಷಣಿಕ ಕ್ಷೇತ್ರದಲ್ಲಿ ಹುಲಕೋಟಿಯ ರಾಜೇಶ್ವರ ವಿದ್ಯಾನಿಕೇತನ ಸಂಸ್ಥೆಯ ರಾಘವೇಂದ್ರ ಶೆಟ್ಟಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇವರಿಂದ ರಾಷ್ಟ್ರೀಯ ಗ್ರಂಥಾಲಯ, ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಭಗವಂತಪ್ಪ ತಾರಿಕೊಪ್ಪ, ಬೆಂಗಳೂರಿನಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪಡೆದ ವಿಜಯ ಕುಮಾರ್ ಎಚ್.ಬಣಕಾರ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಬಾಲ ಭವನ ಸೊಸೈಟಿ ಇವರುಗಳ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಕಲಾಶ್ರೀ ಪ್ರಶಸ್ತಿ ಪಡೆದಿದ್ದಕ್ಕಾಗಿ ಕೃಷ್ಣಪ್ರಿಯಾ ಆನಂದ ಬದಿ, ಎನ್.ಸಿ.ಸಿ ಕ್ಯಾಡೆಟ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಹನುಮಂತರಾವ್ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು.

ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳ ವಿವರ: ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಆಶಿಫ್ ಶೇಖಸಾಬ ನದಾಫ್, ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಶಾಹೀನ ಗುಲಾಂ ಸಾಬ ನದಾಫ್, ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಮಹಮ್ಮದ ರಫೀಕ್ ಎನ್.ರೇವಡಿಗಾರ, ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಮುತ್ತು ರಮೇಶ ಭಾವಿ, ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿನುತ ಅಕ್ಕಸಾಲಿಗ, ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ನಿರೀಕ್ಷಿತಾ ಡೊಳ್ಳಿನ, 29ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ನಿಖಿಲರೆಡ್ಡಿ ತೇರಿನಗಡ್ಡಿ, ರಾಜ್ಯ ಮಟ್ಟದ ಸ್ಕೂಲ್ ಗೇಮ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಚಿನ್ಮಯ ಎಸ್.ಕಪ್ಪತನವರ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರುಗಳು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags: BreakingNewsKarnatakarepublic dayVijayasakshivijayasakshinewsಸಚಿವ ಡಾ. ಎಚ್.ಕೆ. ಪಾಟೀಲ
ShareSendShare
Previous Post

76ನೇ ಗಣರಾಜ್ಯೋತ್ಸವ ದಿನಾಚರಣೆ: ಗಮನ ಸೆಳೆದ ಪಥ ಸಂಚಲನ

Next Post

ಆಟೋ ಚಾಲಕರು ಆರೋಗ್ಯದ ಕಾಳಜಿ ವಹಿಸಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಆಟೋ ಚಾಲಕರು ಆರೋಗ್ಯದ ಕಾಳಜಿ ವಹಿಸಿ

ಆಟೋ ಚಾಲಕರು ಆರೋಗ್ಯದ ಕಾಳಜಿ ವಹಿಸಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

October 28, 2026
ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

October 28, 2026
ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

October 28, 2026
ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

October 28, 2026
ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper