HomeDharwadಕ್ಷೇತ್ರ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದೆ

ಕ್ಷೇತ್ರ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ತೀವ್ರ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದು ಈ ಅಭಿಯಾನದ ಉದ್ದೇಶವಾಗಿದೆ. ಜೂನ್ 16, 2025ರಿಂದ ಜುಲೈ 31, 2025ರವರೆಗೆ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಈ ಕುರಿತಂತೆ ಕ್ಷೇತ್ರ ಮಟ್ಟದಲ್ಲಿ ಅರಿವು ಮೂಡಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.

ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ 2025ನ್ನು ಜಿಲ್ಲೆಯ ಯಶಸ್ವಿಯಾಗಿ ಆಯೋಜಿಸುವ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಕೈಗಳ ಸ್ವಚ್ಛತೆ, ಕೈ ತೊಳೆಯುವ ವಿಧಾನ ಕುರಿತಂತೆ ಮತ್ತು ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಶಾಲಾ ಶಿಕ್ಷಣ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರಲ್ಲದೆ, ಅಭಿಯಾನದ ಕುರಿತು ಎಸ್.ಡಿ.ಎಮ್ ಧಾರವಾಡ ಮತ್ತು ಕಿಮ್ಸ್ ಹುಬ್ಬಳ್ಳಿ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ವಿಭಾಗ ಮತ್ತು ಸಮುದಾಯ ಆರೋಗ್ಯ ವಿಭಾಗದವರಿಂದಲೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪಾ ಗಾಬಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಅತಿಸಾರದಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಲಭ್ಯವಿರುವುದಾಗಿ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಮ್. ಹೊನಕೇರಿ ಮಾತನಾಡಿ, ಇದೊಂದು ಮಹತ್ವದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳು ಸಹಕಾರ ನೀಡಬೇಕೆಂದು ಕೋರಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸುಜಾತಾ ಹಸವೀಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯ ಅಧಿಕಾರಿಗಳು, ತಾಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು, ಎಸ್.ಡಿ.ಎಮ್ ಮತ್ತು ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ತಜ್ಞ ವೈದ್ಯರು ಉಪಸ್ಥಿತರಿದ್ದರು.

ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನದಡಿ ಜಿಲ್ಲೆಯಲ್ಲಿ ಹುಟ್ಟಿದ ಮಗುವಿನಿಂದ ಹಿಡಿದು ಐದು ವರ್ಷದವರೆಗಿನ ಮಕ್ಕಳನ್ನು ಗುರುತಿಸಿ ಓಆರ್‌ಎಸ್ ನೀಡಲಾಗುತ್ತದೆ. ಜಿಲ್ಲೆಯಲ್ಲಿ 1622 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 95,118 ಮಕ್ಕಳಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಓಆರ್‌ಎಸ್ ಕಾರ್ನರ್‌ಗಳನ್ನು ಮಾಡಲು ಮತ್ತು ಕೈತೊಳೆಯುವ ವಿಧಾನ ಕುರಿತಂತೆ ಮಕ್ಕಳಿಗೆ ತಿಳಿಸಿ ಹೇಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!