HomeGadag Newsತಂಬಾಕಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ

ತಂಬಾಕಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ `ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು’ ಎಂಬ ಘೋಷಣೆಯೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಆಯುಷ್ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸ್ಪೂರ್ತಿ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಜಿಮ್ಸ್ ಪ್ಯಾರಾ ಮೆಡಿಕಲ್ ಕಾಲೇಜು ಗದಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಮುನ್ಸಿಪಲ್ ಕಾಲೇಜ ಆವರಣದಿಂದ ಆರಂಭಗೊಂಡು ಗಾಂಧೀ ಸರ್ಕಲ್, ಮಹೇಂದ್ರಕರ ಸರ್ಕಲ್, ಹಳೇ ಬಸ್ ನಿಲ್ದಾಣ, ರೋಟರಿ ಸರ್ಕಲ್ ಮೂಲಕ ಹಳೇ ಜಿಲ್ಲಾ ಆಸ್ಪತ್ರೆವರೆಗೆ ಜಾಥಾ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನದ ಮೂಲಕ `ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳ ರಕ್ಷಣೆ’ ಮಾಡಲು ಸಾದ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮಧಿಕಾರಿ ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಮಾತನಾಡಿ, ತಂಬಾಕು ವ್ಯಸನದಿಂದ ಆರೋಗ್ಯ ಮೇಲೆ ಬಹಳಷ್ಟು ದುಷ್ಟರಿಣಾಮಗಳು ಉಂಟಾಗುತ್ತವೆ. ಉದಾಹರಣೆಗೆ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಹಾಗೂ ತಂಬಾಕಿನಲ್ಲಿನ ನಿಕೋಟಿನ್ ಅಂಶ ರಕ್ತನಾಳಗಳಲ್ಲಿ ಸೇರಿ ದೇಹದ ಪ್ರತಿಯೊಂದು ಅಂಗದ ಮೇಲೆ ಪರಿಣಾಮ ಬಿರುತ್ತದೆ. ಈ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ಕೋಟ್ಪಾ ದಾಳಿ, ವ್ಯಸನಿಗಳಿಗೆ ಆಪ್ತ ಸಮಾಲೋಚನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿ.ಪಂ ಯೋಜನಾ ನಿರ್ದೇಶಕ ಜಗದೇವಪ್ಪ ಬಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮೀನಾಕ್ಷಿ, ತಾಲೂಕು ಆರೋಗ್ಯಾದಿಕಾರಿ ಡಾ. ಪ್ರೀತ ಖೋನಾ, ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಕದ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಮ್.ವೈ. ಹೀರೆಮನಿಪಾಟೀಲ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾನ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಉಪ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ, ಜಿಮ್ಸ್ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗಹಿಸಿದ್ದರು. ಎಸ್.ಎಸ್. ಪೀರಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ತಂಬಾಕು ಕುರಿತಾದ ನೇರ/ಪರೋಕ್ಷ ಜಾಹಿರಾತುಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವದು, ತಂಬಾಕು ಕಂಪನಿಗಳಿಂದ ಉಚಿತ ಉಡುಗೊರೆ ನೀಡುವ ಮೂಲಕ ಮಕ್ಕಳು ತಂಬಾಕು ವ್ಯಸನಕ್ಕೆ ಬಲಿಯಾಗುವದನ್ನು ತಪ್ಪಿಸಲು ಕ್ರಮ ವಹಿಸಬೇಕಾಗಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!