ಮಂಗಳೂರು: ಮೀನುಗಾರಿಕಾ ಬೋಟ್ನ ತಳಭಾಗ ಕಲ್ಲಿಗೆ ಬಡಿದು ನೀರು ನುಗ್ಗಿದ ಪರಿಣಾಮ ಬೋಟ್ ಮುಳುಗಡೆಯಾದ ಘಟನೆ ಮಂಗಳೂರಿನ ಅಳಿವೆಬಾಗಿಲಿನಲ್ಲಿ ನಡೆದಿದೆ.
‘ಆಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಳಿವೆಬಾಗಿಲಿನಲ್ಲಿ ಬೋಟ್ನ ತಳಭಾಗ ಕಲ್ಲಿಗೆ ಬಡಿದಿದೆ. ಪರಿಣಾಮ ಬೋಟ್ಗೆ ನೀರು ನುಗ್ಗಿ ಕೆಲವೇ ಸಮಯದಲ್ಲಿ ಮುಳುಗಡೆಯಾಗಿದೆ.
ಬೋಟ್ನಲ್ಲಿದ್ದ ಆರು ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದು, ಸಮೀಪದಲ್ಲಿದ್ದ ಇತರೆ ಮೀನುಗಾರಿಕಾ ಬೋಟ್ಗಳಲ್ಲಿದ್ದ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಈ ಬೋಟ್ ಇಬ್ರಾಹಿಂ ಖಲೀಲ್ ಎಂಬುವರಿಗೆ ಸೇರಿದ್ದು ಎನ್ನಲಾಗಿದ್ದು, ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.



