ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಕಾಂ ಕೋರ್ಸಿನ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳಾದ ತೌಸಿಫ ಮುಲ್ಲಾ ಶೇ. 93.42 ಅಂಕ ಪಡೆದು ಪ್ರಥಮ ಸ್ಥಾನ, ಸರ್ವೀಸ್ ಮಾರ್ಕೆಟಿಂಗ್ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾನೆ. ತೇಜಸ್ವಿನಿ ಮೆಣಸಿನಕಾಯಿ ಶೇ. 87.85 ಅಂಕ ಪಡೆದು ದ್ವಿತೀಯ ಸ್ಥಾನ, ಸರ್ವೀಸ್ ಮಾರ್ಕೆಟಿಂಗ್ ಹಾಗೂ ಕಲ್ಚರಲ್ ಡೈವರ್ಸಿಟಿ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾಳೆ. ಹರಿಹರನ್ ಚಂದ್ರಶೇಖರ್ ಶೇ. 87.85 ಅಂಕ ಪಡೆದು ತೃತಿಯ ಸ್ಥಾನ, ಆಶಾ ಮಣ್ಣನ್ನವರ ಶೇ. 82.85 ಅಂಕ ಪಡೆದು ನಾಲ್ಕನೇ ಸ್ಥಾನ, ಹಾಗೂ ಸರ್ವೀಸ್ ಮಾರ್ಕೆಟಿಂಗ್ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ.
ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ ಹಾಗೂ ಉಪನ್ಯಾಸಕ, ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.