HomePolitics Newsಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿ.ವೈ. ವಿಜಯೇಂದ್ರ: ರಾಜಕೀಯ ಬೆಳವಣಿಗೆಗಳ ನಡುವೆ ವಿಶೇಷ ಪೂಜೆ!

ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿ.ವೈ. ವಿಜಯೇಂದ್ರ: ರಾಜಕೀಯ ಬೆಳವಣಿಗೆಗಳ ನಡುವೆ ವಿಶೇಷ ಪೂಜೆ!

For Dai;y Updates Join Our whatsapp Group

ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಿಜಯೇಂದ್ರ ಅವರೊಂದಿಗೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಕರಾವಳಿ ಭಾಗದ ಹಲವು ಬಿಜೆಪಿ ಶಾಸಕರು ಸಹ ದೇವಸ್ಥಾನಕ್ಕೆ ಭೇಟಿ ನೀಡಿದರು.

ಇತ್ತೀಚೆಗೆ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ವಿಚಾರ ರಾಜ್ಯ ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ (ಬಿಜೆಪಿ ಸಿಎಲ್ಪಿ) ಸಭೆ ನಡೆಸಿ, ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲು ಮೊದಲಿಗೆ ಯೋಜನೆ ರೂಪಿಸಲಾಗಿತ್ತು.

ಆದರೆ, ಪವಿತ್ರ ಕ್ಷೇತ್ರದಲ್ಲಿ ರಾಜಕೀಯ ಸಭೆ ಹಾಗೂ ಆಣೆ-ಪ್ರಮಾಣ ನಡೆಸುವ ಪ್ರಸ್ತಾಪಕ್ಕೆ ಪಕ್ಷದ ಹಿರಿಯ ನಾಯಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಯೋಜನೆಯನ್ನು ಕೈಬಿಡಲಾಯಿತು.

ಈ ಬೆಳವಣಿಗೆಯ ಬಳಿಕ ಪಕ್ಷದೊಳಗಿನ ಗೊಂದಲಕ್ಕೆ ವಿಜಯೇಂದ್ರ ಅವರನ್ನೇ ಕೆಲ ನಾಯಕರು ಹೊಣೆ ಮಾಡುತ್ತಿರುವ ಮಾತುಗಳು ಕೇಳಿಬಂದಿದ್ದವು. ಇದರ ನಡುವೆ ವಿಜಯೇಂದ್ರ ಅವರು ಎಲ್ಲಾ ಶಾಸಕರೊಂದಿಗೆ ಭೇಟಿ ನೀಡುವ ಯೋಜನೆಯನ್ನು ಕೈಬಿಟ್ಟು, ಒಬ್ಬರೇ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಜಕೀಯ ವಲಯದಲ್ಲಿ ಈ ಭೇಟಿಗೆ ವಿವಿಧ ರೀತಿಯ ವ್ಯಾಖ್ಯಾನಗಳು ಕೇಳಿಬರುತ್ತಿದ್ದು, ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹಾಗೂ ಅಡ್ಡಮತದಾನದ ಬೆಳವಣಿಗೆಗಳ ನಡುವೆಯೇ ವಿಜಯೇಂದ್ರ ದೇವರ ಮೊರೆ ಹೋಗಿರುವುದು ಗಮನ ಸೆಳೆದಿದೆ. ಆದರೆ, ಈ ಕುರಿತು ಬಿಜೆಪಿ ನಾಯಕತ್ವದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img