ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಲಾಯಕ್ ಇಲ್ಲ: ರಮೇಶ್ ಜಾರಕಿಹೊಳಿ!

0
Spread the love

ಬೆಳಗಾವಿ:- ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಲಾಯಕ್ ಇಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ವಿಜಯೇಂದ್ರಗೆ ಹುಡುಗಾಟಿಕೆ ಬುದ್ಧಿಯಿದೆ, ಸಣ್ಣ ಹುಡುಗ ಇದ್ದಾನೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಲಾಯಕ್ ಇಲ್ಲ. ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಹೇಳಿದ್ದೇವೆ. ಯಡಿಯೂರಪ್ಪನವರು ಹೋರಾಟ ಮಾಡಿ ಆ ಸ್ಥಾನಕ್ಕೆ ತಲುಪಿದ್ದರು. ಆದರೆ ಯಡಿಯೂರಪ್ಪ ಮಗನಾಗಿ ಆ ಸ್ಥಾನಕ್ಕೆ ತಲುಪಿ ವ್ಯರ್ಥವಾಗುತ್ತಿದ್ದಾರೆ. ಈಗ ಅಧ್ಯಕ್ಷ ಸ್ಥಾನ ತ್ಯಜಿಸಿ, ಅನುಭವ ಆದ್ಮೇಲೆ ಅಧ್ಯಕ್ಷರಾದರೆ ಸೂಕ್ತ ಎಂದು ಕಿಡಿಕಾರಿದ್ದಾರೆ.

ವಿಜಯೇಂದ್ರ ಬಾಯಿಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಗಂಭೀರವಾಗಿ ಕೆಲಸ ಮಾಡಬೇಕು. ಆದರೆ ಬಿವೈ ವಿಜಯೇಂದ್ರ ಬಹಳ ಹತಾಶೆ ಭಾವನೆಯಿಂದ ಅಧ್ಯಕ್ಷ ಸ್ಥಾನ ನಡೆಸುತ್ತಿದ್ದಾನೆ. ವಕ್ಫ್ ವಿರುದ್ಧ ಹೋರಾಟಕ್ಕೆ ನಾವು ಬಹಳಷ್ಟು ಮನವಿ ಮಾಡಿದ್ದೆವು ಎಂದು ಹೇಳಿದ್ದಾರೆ.

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಾಯಕ್ ಇಲ್ಲಾ ಅಂತಾ ಪದೇ ಪದೇ ಹೇಳುತ್ತೇವೆ. ಹೈಕಮಾಂಡ್​ಗೂ ಮನವರಿಕೆ ಆಗಿದೆ. ಯಾವುದೇ ಟೈಮ್​ನಲ್ಲಿ ಏನೋ ತಿಳಿದು ಮಾಡಿದ್ದಾರೆ. ಮಾಡಿದ ಬಳಿಕ ಅವನ ನಡುವಳಿಕೆ ತಿಳ್ಸಿಕೊಟ್ಟಿದ್ದೇವೆ. ಮುಂದೆ ಏನು ಮಾಡ್ತಾರೆ ನೋಡೋಣ. ಅಧ್ಯಕ್ಷರ ಬದಲಾವಣೆ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ‌ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here