ಬ್ಯಾಕ್ ಟು ಬ್ಯಾಕ್ ಸೋಲು: ಕೊನೆಗೂ ಅಭಿಮಾನಿಗಳ ಮಾತಿಗೆ ಜೈ ಎಂದ ಚಿರಂಜೀವಿ

0
Spread the love

ಟಾಲಿವುಡ್ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಮೆಗಾಸ್ಟಾರ್ ಚಿರಂಜೀವಿ ಕೂಡ ಒಬ್ಬರು. 69ನೇ ವಯಸ್ಸಿನಲ್ಲಿ ಯುವ ನಟರು ನಾಚುವಂತೆ ನಟಿಸೋ ಚಿರಂಜೀವಿ ದೇಶ ವಿದೇಶಗಳಲ್ಲೂ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇತ್ತೀಚೆಗೆ ಮೆಗಾಸ್ಟಾರ್ ಚಿರಂಜೀವಿ ನಟನೆಯ ಇತ್ತೀಚಿನ ಸಿನಿಮಾಗಳು ಸೋಲು ಕಾಣುತ್ತಿವೆ. ಬ್ಯಾಕ್ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನೇ ನೀಡುತ್ತಿರುವ ಚಿರಂಜೀವಿ ಇದೀಗ ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿದ್ದಾರೆ.

Advertisement

ಇಷ್ಟು ದಿನಗಳ ಕಾಲ ಹಳೆಯ ಕಾಲದ ಮಾದರಿ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ ಚಿರಂಜೀವಿಗೆ ಹೊಸ ಮಾದರಿಯ ಸಿನಿಮಾಗಳನ್ನು ಮಾಡುವಂತೆ ಅಭಿಮಾನಿಗಳು ಸಲಹೆ ನೀಡುತ್ತಿದ್ದಾರೆ. ಅಭಿಮಾನಿಗಳ ಸಲಹೆಗೆ ಜೈ ಎಂದ ಚಿರಂಜೀವಿ ಇದೀಗ ಮಾದರಿಯ ಸಿನಿಮಾಗಳತ್ತ ಗಮನ ಹರಿಸಿದ್ದಾರೆ.

ನಾನಿ ನಟನೆಯ ‘ದಸರಾ’ ಸಿನಿಮಾ ನಿರ್ದೇಶಿಸಿ ಗಮನ ಸೆಳೆದಿರುವ ನಿರ್ದೆಶಕ ಶ್ರೀಕಾಂತ್ ಒಡೆಲ ನಿರ್ದೇಶನದ ಹೊಸ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾಕ್ಕೆ ನಟ ನಾನಿ ಬಂಡವಾಳ ಹೂಡುವುದರ ಜೊತೆಗೆ ಸಣ್ಣದೊಂದು ಪಾತ್ರ ಮಾಡುತ್ತಿದ್ದಾರೆ. ಇದೀಗ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದ್ದು, ಪೋಸ್ಟರ್ ಗಮನ ಸೆಳೆಯುತ್ತಿದೆ. ಪಕ್ಕಾ ವಯಲೆನ್ಸ್ ಇರುವ ಕತೆಯನ್ನು ಸಿನಿಮಾ ಒಳಗೊಂಡಿದೆ ಅನ್ನೋದು ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಗೊತ್ತಾಗಿದೆ.

ಮೆಗಾಸ್ಟಾರ್ ಚಿರಂಜೀವಿ ಮತ್ತು ನಿರ್ದೇಶಕ ಶ್ರೀಕಾಂತ್ ಒಡೆಲ ಇಬ್ಬರೂ ಕೈಯನ್ನು ರಕ್ತದಲ್ಲಿ ಅದ್ದಿ ಪರಸ್ಪರ ಕೈ ಹಿಡಿದುಕೊಂಡು ಚಿತ್ರವನ್ನು ಹಂಚಿಕೊಂಡಿದ್ದಾರೆ. ‘ಇದು ರಕ್ತದಲ್ಲಿ ಮಾಡಿದ ಪ್ರತಿಜ್ಞೆ’ ಎಂಬ ಅಡಿಬರಹ ಕೊಟ್ಟಿದ್ದಾರೆ. ಸಿನಿಮಾದ ಪೋಸ್ಟರ್​ನಲ್ಲಿ ಸಹ ‘ಇವನಿಗೆ ಶಾಂತಿ ಸಿಗುವುದು ಹಿಂಸೆಯಲ್ಲೇ’ ಎಂಬ ಸಾಲು ಬರೆಯಲಾಗಿದೆ. ರಕ್ತದ ಮೆತ್ತಿದ ಕೈನ ಚಿತ್ರ ಪೋಸ್ಟರ್​ನಲ್ಲಿದೆ. ನಟ ನಾನಿ, ಶ್ರೀಕಾಂತ್ ಒಡೆಲ ಹಾಗೂ ಮೆಗಾಸ್ಟಾರ್ ಚಿರಂಜೀವಿ ಒಟ್ಟಿಗಿರುವ ಚಿತ್ರವೊಂದನ್ನು ಸಹ ಚಿರಂಜೀವಿ ಹಂಚಿಕೊಂಡಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here