ಕೋಲಾರ: ಕೋಲಾರದ ಪ್ರಶಾಂತ್ ನಗರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಹೆಂಡತಿಯ ಪ್ರಿಯಕರನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಮೂಲದ ಅಮೀನ್ (30) ಕೊಲೆಯಾದ ವ್ಯಕ್ತಿಯಾಗಿದ್ದು, ಇರ್ಫಾನ್ ಹಾಗೂ ಸಹಚರರಿಂದ ಕೊಲೆ ಮಾಡಲಾಗಿದೆ.
ಇರ್ಫಾನ್ ಪತ್ನಿ ಹುಸ್ನಾ ಜೊತೆಗೆ ಅಮೀನ್ ಗೆ ಅಕ್ರಮ ಸಂಬಂಧ ಹಿನ್ನೆಲೆ ಕೊಲೆಯಾಗಿದೆ ಎಂದು ತಿಳಿದು ಬಂದಿದೆ. ಇಂದು ಹುಸ್ನಾ ಅಕ್ಕ ಮನೆಯಲ್ಲಿ ರಾಜಿ ಪಂಚಾಯ್ತಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು,
ಈ ವೇಳೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್. ಬಿ ಬೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೂರು ಜನ ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದು, ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



