ಗದಗ: ಬಸ್ ಕೊರತೆ ಹಾಗೂ ಬಸ್ ನಿಲುಗಡೆ ಮಾಡದ ಹಿನ್ನೆಲೆಯಲ್ಲಿ ಗದಗ ಹೊರವಲಯದ ಮಲ್ಲಸಮುದ್ರ ಕ್ರಾಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮಲ್ಲಸಮುದ್ರ ಗ್ರಾಮಕ್ಕೆ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಬಿಡಬೇಕು, ಬಸ್ ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಏಕಾಏಕಿ ಪ್ರತಿಭಟನೆ ಮಾಡಿದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಯಿತು. ಅಷ್ಟೇ ಅಲ್ಲದೆ ಪ್ರಯಾಣಿಕರು ಹಾಗೂ ಜಿಮ್ಸ್ ಆಸ್ಪತ್ರೆಗೆ ತೆರಳುವ ರೋಗಿಗಳು ಪರದಾಡಿದರು.
ಪ್ರತಿಭಟನೆಯಲ್ಲಿ ಜಿಮ್ಸ್ ವೈದ್ಯರು ಸಿಲುಕಿದರು. ಸ್ಥಳಕ್ಕೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದು ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದರು.



