ಊಟದಲ್ಲಿ ಹುಳುಗಳು ಪತ್ತೆ ಹಿನ್ನೆಲೆ: ಯುನಿವರ್ಸಿಟಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
Spread the love

ಬೆಂಗಳೂರು: ಹುಳಬಿದ್ದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ಹಾಸ್ಟೆಲ್ ನಲ್ಲಿ ನಡೆದಿದೆ.

Advertisement

ನಿನ್ನೆ ರಾತ್ರಿ ವಿದ್ಯಾರ್ಥಿಗಳಿಗೆ ನೀಡಲಾದ ಅಹಾರದಲ್ಲಿ ಹುಳ ಪತ್ತೆಯಾಗಿತ್ತು. ತಕ್ಷಣ ಅದರ ದೃಶ್ಯಾವಳಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿದ್ಯಾರ್ಥಿಗಳು, ಹಾಸ್ಟೆಲ್ ಮುಂಬಾಗದಲ್ಲಿ ಪ್ರತಿಭಟನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಆರೋಪಗಳೇನು..? 

ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕೊರತೆಯ ಬಗ್ಗೆ ಪ್ರಶ್ನೆ ಮಾಡಿದ್ರೆ ಗೂಂಡಾಗಳ ರೀತಿ ವರ್ತನೆ ತೋರುತ್ತಾರೆ. ಹೊಸದಾಗಿ ಬಂದ ವಿದ್ಯಾರ್ಥಿಗಳಿಗೆ ಬೆಡ್‌ ವ್ಯವಸ್ಥೆ ಮಾಡಿಲ್ಲ. ಸೂಕ್ತ ಶೌಚಾಲಯ ಇಲ್ಲ, ಗುಣಮಟ್ಟದ ಊಟ ಕೊಡುತ್ತಿಲ್ಲ. 650 ವಿದ್ಯಾರ್ಥಿಗಳಿರುವ ಹಾಸ್ಟೆಲ್‌‌ನಲ್ಲಿ ಒಂದು ಕೊಠಡಿಯಲ್ಲಿ 8 ಮಂದಿಗೆ ಅವಕಾಶ ಬೇರೆ ಬೇರೆ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿರುವ ಆರೋಪ ಮಾಡಿದ್ಧಾರೆ.

ವಾರ್ಡನ್ ದಬ್ಬಾಳಿಕೆ

ಹುಳಬಿದ್ದ ಆಹಾರವನ್ನೇ ತಿನ್ನುವಂತೆ ವಿದ್ಯಾರ್ಥಿನಿಲಯದ ವಾರ್ಡನ್​ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದು ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ಹಾಸ್ಟೆಲ್ ವಾರ್ಡನನ್ನು ಕೂಡಲೇ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿ ಮುಖಂಡರು ವಿಶ್ವವಿದ್ಯಾಲಯದ ಕುಲಪತಿ ಮತ್ತು ರಿಜಿಸ್ಟ್ರಾರ್​ ರನ್ನು ಒತ್ತಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here