HomeGadag Newsನಾಳೆ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ಪೂರ್ವಭಾವಿ ಸಭೆ

ನಾಳೆ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ಪೂರ್ವಭಾವಿ ಸಭೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿನ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ನಗರದಲ್ಲಿ ಹಮ್ಮಿಕೊಳ್ಳುತ್ತಿರುವ ಬೃಹತ್ ಸಮಾವೇಶದ ಕುರಿತು ಡಿ.೨೦ರಂದು ಸಂಜೆ ೪ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ. 

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ ಪಕ್ಷದ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರಿಪಾರ್ಮ್ಸ್ ವಿಭಾಗ, ಐಟಿ-ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ, ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ನೇತೃತ್ವದಲ್ಲಿ, ರೋಣ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಸೇರಿದಂತೆ ಕೆಪಿಸಿಸಿ ಉಸ್ತುವಾರಿಗಳು ಹಾಗೂ ಮಾಜಿ ಶಾಸಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!