ಶಾಸಕ ಜಿ.ಎಸ್. ಪಾಟೀಲ ಜನ್ಮದಿನಾಚರಣೆ ಹಿನ್ನೆಲೆ: ಸಾರ್ವಜನಿಕ ಸ್ಥಳಗಳಲ್ಲಿ ವನಮಹೋತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ತಿಮ್ಮಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಮೂಲಕ ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರ 78 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಬಾಬರಿ ಮಾತನಾಡಿ, ಜಿ.ಎಸ್. ಪಾಟೀಲರ ಪರಿಸರ ಪ್ರೇಮ ಮಾದರಿಯಾಗಿದೆ. ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಿ ಬೆಳೆಸುವುದರಿಂದ ಜಾಗತಿಕ ತಾಪಮಾನ ಕಡಿಮೆಯಾಗುತ್ತದೆ. ಆದ್ದರಿಂದ ಎಲ್ಲರೂ ಪರಿಸರದ ಕಾಳಜಿ ಬಗ್ಗೆ ಗಮನ ಹರಿಸಬೇಕು. ಜಿ.ಎಸ್. ಪಾಟೀಲರ ಜನ್ಮದಿನಾಚರಣೆ ಸಂದರ್ಭದಲ್ಲಿ ಕ್ಷೇತ್ರದ ಅವರ ಎಲ್ಲಾ ಅಭಿಮಾನಿಗಳು ಪರಿಸರದ ಬಗ್ಗೆ ಕಾಳಜಿ ವಹಿಸಿ ಗಿಡಗಳನ್ನು ನೆಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶರಣಪ್ಪ ಜೋಗಿನ, ಮಲ್ಲಪ್ಪ ಕನ್ಯರೆ, ಹುಚ್ಚೀರಪ್ಪ ಜೋಗಿನ, ಚನ್ನವಿರಪ್ಪ ಗುಡುನಾಯಕ, ಅಜಿಪ್ಪ ಜೋಗಿನ, ಯಲ್ಲಪ್ಪಗೌಡ ಪಾಟೀಲ, ಸೀತಾ ಜೋಗಿನ, ಶೇಖಪ್ಪ ಘಂಟೆ, ಶಶಿಕುಮಾರು ಲಕ್ಕುಂಡಿ, ಹನುಮಂತ ಇದ್ಲಿ, ಅಶೋಕ ಜೋಗಿನ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here