HDK ಭೂ ಒತ್ತುವರಿ ಆರೋಪ ಹಿನ್ನೆಲೆ: ತೆರವು ಕಾರ್ಯಾಚರಣೆಗೆ ಮುಂದಾದ ಕಂದಾಯ ಇಲಾಖೆ!

0
Spread the love

ರಾಮನಗರ: ಕೇಂದ್ರ ಸಚಿವ ಹೆಚ್‌‌.ಡಿ.ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಹಿನ್ನೆಲೆ ಇಂದು ಒತ್ತುವರಿ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಕರಣ ಸಂಬಂಧ ಎಸ್ಐಟಿ ರಚನೆ ಮಾಡಿದ್ದರು.

Advertisement

ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ.

ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.


Spread the love

LEAVE A REPLY

Please enter your comment!
Please enter your name here