ಮೈಸೂರು: ಹಿಂದುಳಿದ ವರ್ಗದ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಸಹಿಸಲು ಕೆಲವರಿಗೆ ಆಗುತ್ತಿಲ್ಲ. ಹಿಂದುಳಿದ ವರ್ಗದ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ.
ಹೊಟ್ಟೆ ಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಲು ಬೇರೆ ಏನೂ ಇಲ್ಲ, ಹೀಗಾಗಿ ಈ ವಿಚಾರವನ್ನು ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನೂ ಮುಡಾ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಮುಡಾ ಗೆಬ್ಬೆದ್ದು ಹೋಗಿದೆ. ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ತಿಳಿಸಿದ್ದಾರೆ.