ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹೀಗಾಗಿ ದರ್ಶನ್ ನಟನೆಯ ಡೆವಿಲ್ ಸಿನಿಮಾದ ಹಾಡನ್ನು ಚಿತ್ರತಂಡ ಮುಂದೂಡಿದೆ. ಈ ಮಧ್ಯೆ ‘ಡೆವಿಲ್’ ಸಿನಿಮಾ ಬಿಡುಗಡೆಗೆ ತಯಾರಿ ನಡೀತಿದೆ. ಚಿತ್ರದ ಕೆಲಸಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಜೈಲಿನಲ್ಲಿರುವ ದರ್ಶನ್ ಹೇಳಿದ್ದಾರೆ. ಅಂದ ಹಾಗೆ ಅಕ್ಟೋಬರ್ ನಲ್ಲಿ ಡೆವಿಲ್ ಸಿನಿಮಾ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಅದು ಅನುಮಾನ ಅನ್ನೋ ಹಾಗಾಗಿದೆ.
ದರ್ಶನ್ ನಟನೆಯ ಡೆವಿಲ್ ಸಿನಿಮಾ ಅಕ್ಟೋಬರ್ ಕೊನೆಯ ವಾರದಲ್ಲಿ ಬಿಡುಗಡೆ ಆಗಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದ್ರೆ ಸದ್ಯ ದರ್ಶನ್ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗೋದು ಬಹುತೇಕ ಅನುಮಾನವಾಗಿದೆ. ಹೀಗಾಗಿ ಚಿತ್ರತಂಡ ಹೊಸ ದಿನಾಂಕದ ಹುಡುಕಾಟದಲ್ಲಿ ತೊಡಗಿಕೊಂಡಿದೆ ಎನ್ನಲಾಗುತ್ತಿದೆ.
ಡೆವಿಲ್ ಸಿನಿಮಾ ಬಿಡುಗಡೆಗೆ ಇನ್ನೂ ನಾಲ್ಕು ತಿಂಗಳು ಬೇಕು ಎಂಬ ಮಾತುಗಳು ಕೇಳಿ ಬರ್ತಿದೆ. ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಾಗಿದ್ದು, ಅದಕ್ಕಾಗಿ ಹೆಚ್ಚಿನ ಸಮಯ ಬೇಕಾಗುತ್ತದೆ. ಜೊತೆಗೆ ದರ್ಶನ್ ಜೈಲು ಸೇರಿದ್ದು ಅವರು ಬರುವವರೆಗೂ ಕಾಯೋಣ ಎಂದು ಚಿತ್ರತಂಡ ತೀರ್ಮಾನಿಸಿದೆಯಂತೆ.