ರಚಿತಾ ರಾಮ್, ಶ್ರೀನಗರ ಕಿಟ್ಟಿ ನಟನೆಯ ಸಂಜು ವೆಡ್ಸ್ ಗೀತಾ 2 ಸಿನಿಮಾ ಇಂದು ರಿಲೀಸ್ ಆಗಬೇಕಿತ್ತು. ಟೈಟಲ್ ಮೂಲಕವೇ ಕುತೂಹಲ ಕೆರಳಿಸಿದ್ದ ಸಿನಿಮಾವನ್ನು ನೋಡಲು ಅಭಿಮಾನಿಗಳು ಕಾದು ಕೂತಿದ್ದರು. ಆದರೆ ಕೊನೆ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ರಿಲೀಸ್ ಮುಂದಕ್ಕೆ ಹಾಕಲಾಗಿದೆ.
ಶುಕ್ರವಾರ (ಜ.10) ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ಆಗುತ್ತಿಲ್ಲ.‘ಕ್ಷಮಿಸಿ, ಸಿನಿಮಾದ ರಿಲೀಸ್ ದಿನಾಂಕ ಮುಂದೂಡಲಾಗಿದೆ’ ಎಂದು ಚಿತ್ರತಂಡದವರು ಮಾಹಿತಿ ನೀಡಿದ್ದಾರೆ. ನಿರ್ದೇಶಕ ನಾಗಶೇಖರ್ ಮತ್ತು ಟಾಲಿವುಡ್ ನಿರ್ಮಾಪಕ ರಾಮರಾವ್ ನಡುವಿನ ಜಟಾಪಟಿಯೇ ಇದಕ್ಕೆಲ್ಲ ಕಾರಣ ಎನ್ನಲಾಗಿದೆ.
‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಿಡುಗಡೆಗೆ ಹೈದಾರಾಬಾದ್ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ವರದಿಯಾಗಿದೆ. ಈ ಕಾರಣದಿಂದ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುವುದು ಅನಿವಾರ್ಯ ಆಗಿದೆ.



