ಬೆಂಗಳೂರು: ರಾಜಧಾನಿ ಬೆಂಗಳೂರು ಹೆಣ್ಮಕ್ಕಳಿಗೆ ಸೇಫ್ ಸಿಟಿ ಎಂಬ ಮಾತಿದೆ. ಆದರೆ ಕೆಲ ಬೀದಿ ಪುಂಡರು ಈ ಹೆಸರನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದೊಮ್ಮೆ ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರಿಗೆ ಬೇಕಂತೆ ಸ್ಪರ್ಶಿಸಿ ವಿಕೃತಿ ಮೆರೆದಿದ್ದರು. ಇದೀಗ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗುತ್ತಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ಸವಾರ ಅರುಣ್ ಎಂಬಾತ ಅಸಭ್ಯ ವರ್ತನೆ ತೋರಿದ್ದು,
ಈ ಬಗ್ಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಆರೋಪಿ ಅರುಣ್ನನ್ನು ಪೊಲೀಸರು ಬಂಧಿಸಿದ್ದಾರೆ. ದೂರು ನೀಡಿದ ಎರಡೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.