ಬಾಗಲಕೋಟೆ : ಮನೆಯ ಮುಂದೆ ಕಟ್ಟಿ ಹಾಕಿದ್ದ ಹಸುವಿನ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿರುವ ಘಟನೆ ಇಲ್ಲಿನ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ. ಗರ್ಭಾವಸ್ಥೆಯಲ್ಲಿರುವ ಹಸುವಿನ ಕೆಚ್ಚಲಿನ ಒಂದು ಮೊಲೆ ಕೊಯ್ದು ಪಾಪಿಗಳು ವಿಕೃತಿ ಮೆರೆದಿದ್ದಾರೆ. ಸದ್ಯ ಹಸು ರಕ್ತಸ್ರಾವದಿಂದ ನರಳಾಡಿದ್ದು, ಸ್ಥಳೀಯ ಪಶು ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ಗ್ರಾಮದ ಜನರು ಭೇಟಿ ನೀಡುತ್ತಿದ್ದು ಪಾಪಿಗಳ ಈ ಕೃತ್ಯಕ್ಕೆ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಯಿಂದ ಹಸುವಿನ ಮಾಲೀಕರ ಗೋಳಾಟ ಹೇಳತ್ತೀರದ್ದಾಗಿದೆ.



