ಬಾಗಲಕೋಟೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೂರಾರು ಎಕರೆ ಬೆಳೆ ನಾಶವಾಗಿದ್ದು, ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದಲ್ಲಿ ಎರಡು ಮನೆಗಳ ಮೇಲ್ಛಾವಣಿ ಕುಸಿದಿದೆ.
ಮಹಾಂತೇಶ ಗೌಡರ್ ಅವರ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ನೆಲಕ್ಕುರುಳಿದ್ದು, ದೊಡ್ಡ ಅನಾಹುತ ತಪ್ಪಿದೆ. ಇದೇ ಗ್ರಾಮದಲ್ಲಿ ಯಂಕಣ್ಣ ಹಾಳಕೇರಿ ಅವರ ಮನೆಯಲ್ಲಿ ಗೋಡೆಯೊಂದು ಬಿದ್ದು ಹಾನಿ ಸಂಭವಿಸಿದೆ.
ಅದೃಷ್ಟವಶಾತ್, ಎರಡೂ ಮನೆಗಳವರು ಮುಂಚಿತವಾಗಿ ಪಕ್ಕದ ಮನೆಗೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.



