ಬಾಗಲಕೋಟೆ:- ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ರಿಡ್ಜ್ ಮೇಲಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ತಾಯಿ ಸೇರಿದಂತೆ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.
ಸುರೇಖಾ ಭಜಂತ್ರಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ. ಸದ್ಯ ಮಹಿಳೆಯನ್ನು ಸಾವಳಗಿ ಠಾಣೆಗೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸುರೇಖಾ ಭಜಂತ್ರಿ ಎಂಬ ತಾಯಿ ತಮ್ಮ 2 ವರ್ಷದ ಗಂಡು ಮಗುವಿನೊಂದಿಗೆ ಕೃಷ್ಣಾ ನದಿಗೆ ಹಾರಲು ಮುಂದಾಗಿದ್ದರು. ಈ ಸಮಯದಲ್ಲಿ ಸ್ಥಳೀಯರು, ಮಲ್ಲು ಕಲ್ಯಾಣಿ ಅವರು ಗಮನಿಸಿ ತಕ್ಷಣ 112 ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದಿದ್ದಾರೆ. ಸದ್ಯ ಮಹಿಳೆ ವಿಚಾರಣೆ ನಡೆಸಿರುವ ಪೊಲೀಸರು ಗಂಡನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಠಾಣೆಗೆ ಬಂದ ಪತಿ ತಮ್ಮ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.



