ಬಾಗಲಕೋಟೆ:- ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ ಘಟನೆ ಜರುಗಿದೆ.
25 ವರ್ಷದ ಮಲ್ಲಪ್ಪ ಕಿತ್ತಲಿ ಮೃತ ಯುವಕ ಎಂದು ತಿಳಿದು ಬಂದಿದೆ. ಮೃತ ಯುವಕ ಹೊಲಕ್ಕೆ ನೀರುಣಿಸಲು ಹೊಂಡದಲ್ಲಿ ಮೋಟರ್ ಪೈಪ್ ಅಳವಡಿಸಲು ಹೋಗಿದ್ದ ವೇಳೆ ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಬಾದಾಮಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಇನ್ನೂ ಸ್ಥಳೀಯರಿಂದ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.



