ಕೆಲವು ದಿನಗಳ ಹಿಂದಷ್ಟೇ ನಿಟ್ಟುಸಿರು ಬಿಟ್ಟಿದ ದರ್ಶನ್ ಹಾಗೂ 7 ಮಂದಿ ಆರೋಪಿಗಳಿಗೆ ಮತ್ತೆ ನಡುಕ ಶುರುವಾಗಿದೆ. ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಆಚೆ ಇದ್ದಾರೆ. ಈಗ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ .
ರೇಣುಕಾಸ್ವಾಮಿ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ, ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಅನಿಲ್.ಸಿ ನಿಶಾನಿಯಿಂದ ಅರ್ಜಿ ಸಲ್ಲಿಕೆಯಾಗಿದ್ದು, ನಟ ದರ್ಶನ್, ಪವಿತ್ರಾಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಆರೋಪಿಗಳ ಜಾಮೀನು ರದ್ದು ಮಾಡಿವಂತೆ ಮನವಿ ಮಾಡಿದ್ದಾರೆ.
ಕೃತ್ಯದಲ್ಲಿ ನೇರವಾಗಿ ಭಾಗಿಯಾದ 7 ಆರೋಪಿಗಳ ಜಾಮೀನು ರದ್ದು ಕೋರಿ 1,492 ಪುಟಗಳ ಕಡತವನ್ನ ಸುಪ್ರೀಂಗೆ ಸಲ್ಲಿಸಲಾಗಿದೆ. ವಕೀಲ ಅನಿಲ್ ನಿಶಾನಿ ಮುಖಾಂತರ ರಾಜ್ಯ ಪ್ರಾಸಿಕ್ಯೂಷನ್ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದು, ಒಟ್ಟು 15 ಅಂಶಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ.
ಸದ್ಯ ಕೇಸ್ನಲ್ಲಿ ಜಾಮೀನು ಪಡೆದು ರಿಲೀಫ್ ಆಗಿದ್ದ ದರ್ಶನ್ ಅವರು ಕೆಲ ಕಾಲ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಕಾಲ ಕಳೆದಿದ್ದರು. ಇನ್ನೇನು ಎಲ್ಲ ಸರಿಹೋಯಿತು ಎಂದು ಹಾಯಾಗಿದ್ದ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿನ ವಿಚಾರಣೆ ಆತಂಕ ತರಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪರಿದಿವಾಲಾ ಹಾಗೂ ಆರ್.ಮಹದೇವನ್ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದ್ದು, ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನ ಎತ್ತಿ ಹಿಡಿಯುತ್ತಾ ಅಥವಾ ಜಾಮೀನು ರದ್ದು ಮಾಡಿ ಆದೇಶ ಹೊರಡಿಸುತ್ತ ಎಂದು ಕಾದು ನೋಡಬೇಕಿದೆ.