ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ ಐಆರ್ ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ಸಿ ಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
Advertisement
ಪ್ರಕರಣ ಸಂಬಂಧ ಅರುಣ್ ಕುಮಾರ್ ಪುತ್ತಿಲ ಸೋಮವಾರ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪುತ್ತಿಲ ಪರ ವಕೀಲರ ವಾದ ಪುರಸ್ಕರಿಸಿ ಜಾಮೀನು ನೀಡಿದೆ. 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು.