HomeKarnataka Newsಬಿಟ್‌ಕಾಯಿನ್ ಪ್ರಕರಣದಲ್ಲಿ ಶ್ರೀಕಿಗೆ ಜಾಮೀನು; ಹೈಕೋರ್ಟ್‌ನಿಂದ ಮಹತ್ವದ ಆದೇಶ

ಬಿಟ್‌ಕಾಯಿನ್ ಪ್ರಕರಣದಲ್ಲಿ ಶ್ರೀಕಿಗೆ ಜಾಮೀನು; ಹೈಕೋರ್ಟ್‌ನಿಂದ ಮಹತ್ವದ ಆದೇಶ

For Dai;y Updates Join Our whatsapp Group

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧಿತರಾಗಿದ್ದ ಆರೋಪಿ ಶ್ರೀಕಿ ಹಾಗೂ ರಾಬಿನ್ ಖಂಡೇಲವಾಲ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದ ಮುಂದೆ ಜಾಮೀನು ಅರ್ಜಿ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ ಇಡಿ ಪರ ವಕೀಲ ಮಧು ಎನ್. ರಾವ್ ವಾದ ಮಂಡಿಸಿ, ಆರೋಪಿಗಳು ಹ್ಯಾಕ್ ಮಾಡಿ ಸಂಗ್ರಹಿಸಿದ್ದ ಹಣವನ್ನು ಐಷಾರಾಮಿ ಜೀವನಕ್ಕಾಗಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಡಾರ್ಕ್ ವೆಬ್ ಮೂಲಕ ಹಣ ವರ್ಗಾವಣೆ ಮಾಡಿರುವ ಆರೋಪವಿದ್ದು, ಪ್ರಕರಣದ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಸದ್ಯಕ್ಕೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಆರೋಪಿಗಳ ಪರ ವಕೀಲರಾದ ಬಿಪಿನ್ ಹೆಗ್ಡೆ ಹಾಗೂ ಸಂದೇಶ್ ಚೌಟ ವಾದ ಮಂಡಿಸಿದರು. ಇಡಿ ಅಧಿಕಾರಿಗಳು ಆರೋಪಿಗಳಿಂದ ಯಾವುದೇ ವಸ್ತುಗಳನ್ನು ಜಪ್ತಿ ಮಾಡಿಕೊಂಡಿಲ್ಲ. ನೋಟಿಸ್ ನೀಡಿದಾಗಲೆಲ್ಲಾ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದಾರೆ. ಹಲವು ದಿನಗಳಿಂದ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇಬ್ಬೂ ಕಡೆಯ ವಾದಗಳನ್ನು ಆಲಿಸಿದ ಹೈಕೋರ್ಟ್, ಶ್ರೀಕಿ ಹಾಗೂ ರಾಬಿನ್ ಖಂಡೇಲವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img