ಇಂದು ಕೂಡ ದರ್ಶನ್ʼಗೆ ಸಿಗದ ಜಾಮೀನು: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

0
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ. ಇಂದು ಪ್ರಕರಣದ ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮೊದಲಿಗೆ ನಡೆದು ವಕೀಲರು ವಾದಿಸಿದರು. ಬಳಿಕ ಪ್ರಕರಣದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ವಾದ ಸರಣಿ ಆರಂಭಿಸಿ, ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದರು.

Advertisement

ನಟ ದರ್ಶನ್​ಗೆ ಮತ್ತೆ ನಿರಾಸೆ ಆಗಿದ್ದು, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದ್ದಾರೆ.  ನಾಳೆ ದರ್ಶನ್ ಪರ ವಕೀಲರಾ ಸಿವಿ ನಾಗೇಶ್ , ಎಸ್​ಪಿಪಿ ವಾದಕ್ಕೆ ಪ್ರತಿವಾದ ಮಂಡಿಸಲಿದ್ದಾರೆ. ನಾಳೆಗೆ ಬೇಲ್​ ದರ್ಶನ್ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ನೂರಕ್ಕೂ ಹೆಚ್ಚು ದಿನಗಳು ಕಳೆದಿದೆ. ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್​​ರನ್ನು ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್​​ ಮಾಡಲಾಯಿತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದರ್ಶನ್​​ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ  57ನೇ ಸೆಷನ್ಸ್​​ ​ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.


Spread the love

LEAVE A REPLY

Please enter your comment!
Please enter your name here