ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಕೊನೆಗೂ ಜಾಮೀನು ಸಿಕ್ಕಿದೆ. ಬರೋಬ್ಬರಿ 7 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಸಿಕ್ಕಿದೆ. ದರ್ಶನ್ ಗೆ ಜಾಮೀನು ಸಿಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ ಕೈಯಲ್ಲಿ ದೇವರ ಪ್ರಸಾದ ಹಿಡಿದುಕೊಂಡಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ.
ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಪೋಸ್ಟ್ ಮಾಡಿದ್ದಾರೆ. ದೇವರಿಗೆ ಪ್ರಾರ್ಥನೆ ಫಲಿಸಿತು ಎಂಬ ಅರ್ಥದಲ್ಲಿ ಫೋಟೋ ಶೇರ್ ಮಾಡಿದ್ದಾರೆ.
ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು.
ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ದೊರೆತಿದೆ.



