ವಿಜಯಸಾಕ್ಷಿ ಸುದ್ದಿ, ಗದಗ : ಸಿಬಿಎಸ್‌ಸಿ ಪಠ್ಯಕ್ರಮದ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶವನ್ನು ಪಡೆದಿದೆ.
15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಬಾಲಾಜಿ ಪಾಣಗಂಟಿ ಶೇ. 88.6 ಅಂಕದೊಂದಿಗೆ ಶಾಲೆಗೆ ಪ್ರಥಮ, ಶ್ರೇಯಾ ಮುನವಳ್ಳಿ ಶೇ. 88.4 ಫಲಿತಾಂಶದೊಂದಿಗೆ ದ್ವಿತೀಯ, ಫಾಲ್ಗುಣಿ ವಾರ್ಕರ ಮತ್ತು ಶ್ರೀಗೌರಿ ಎಚ್.ಎಲ್. ಶೇ. 87.6 ಅಂಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ಉಪ ಪ್ರಾಚಾರ್ಯರು, ಪಾಲಕರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.



