HomeEntertainmentರಾಷ್ಟ್ರಪತಿಗಳಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಾಲಯ್ಯ, ಅಜಿತ್ ಕುಮಾರ್, ಶೇಖರ್ ಕಪೂರ್

ರಾಷ್ಟ್ರಪತಿಗಳಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಾಲಯ್ಯ, ಅಜಿತ್ ಕುಮಾರ್, ಶೇಖರ್ ಕಪೂರ್

For Dai;y Updates Join Our whatsapp Group

Spread the love

2025ನೇ ಸಾಲಿನ ‘ಪ್ರದ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ಏಪ್ರಿಲ್ 28ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದಿದೆ. ತೆಲುಗು ಚಿತ್ರರಂಗದ ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ,‌ ಅಜಿತ್‌ ಕುಮಾರ್, ನಿರ್ದೇಶಕ ಶೇಖರ್ ಕಪೂರ್ ಮುಂತಾದವರು ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಸೆಲೆಬ್ರಿಟಿಗಳಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ನಂದಮೂರಿ ಬಾಲಕೃಷ್ಣ ಅವರು ತೆಲುಗು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಸಿನಿಮಾ ರಂಗದ ಜೊತೆಗೆ ರಾಜಕೀಯ ಕ್ಷೇತ್ರದಲ್ಲೂ ತೊಡಗಿಕೊಂಡಿದ್ದಾರೆ. ಇನ್ನು, ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳ ಮೂಲಕ ಜನರಿಗೆ ಮನರಂಜನೆ ನೀಡಿದ್ದಾರೆ. ಬಾಲಿವುಡ್​ನಲ್ಲಿ ವಿಭಿನ್ನವಾದ ಸಿನಿಮಾಗಳ ಮೂಲಕ ನಿರ್ದೇಶಕ ಶೇಖರ್ ಕಪೂರ್​ ಅವರು ಜನಮನ ಗೆದ್ದಿದ್ದು ಅವರುಗಳಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

ಈ ವರ್ಷ ಜನವರಿಯಲ್ಲಿ ಒಟ್ಟು 139 ಜನರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು. ಈ ಪೈಕಿ 71 ಮಂದಿಗೆ ಇಂದು (ಏ.28) ಪ್ರಶಸ್ತಿ ನೀಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮುಂತಾದವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಗಾಯಕ ಅರಿಜಿತ್ ಸಿಂಗ್, ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಗಾಯಕ ಪಂಕಜ್ ಉದಾಸ್ ಅವರಿಗೆ ಮರಣೋತ್ತರವಾಗಿ ಪದ್ಮ ಭೂಷಣ ಪ್ರಶಸ್ತಿ ನೀಡಲಾಯಿತು. ಅವರ ಪತ್ನಿ ಫರಿದಾ ಉದಾಸ್ ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಆಂಧ್ರ ಪ್ರದೇಶದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ನಂದಮೂರಿ ಬಾಲಕೃಷ್ಣ ಅವರು ಪ್ರದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದರು. ನಟ ಅಜಿತ್ ಕುಮಾರ್ ಅವರು ಸೂಟ್ ಧರಿಸಿ ಪ್ರಶಸ್ತಿ ಪಡೆದರು. ಸಿನಿಮಾ ಮಾತ್ರವಲ್ಲದೇ ಕ್ರೀಡೆ, ಉದ್ಯಮ, ವೈದ್ಯಕೀಯ ಮುಂತಾದ ಕ್ಷೇತ್ರದ ಸಾಧಕರಿಗೂ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!