HomeKarnataka Newsಕಮಲ್ ಹಾಸನ್ ಚಿತ್ರಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಶಿವರಾಜ್...

ಕಮಲ್ ಹಾಸನ್ ಚಿತ್ರಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಶಿವರಾಜ್ ತಂಗಡಗಿ

For Dai;y Updates Join Our whatsapp Group

Spread the love

ತಮಿಳು ನಟ ಕಮಲ್ ಹಾಸನ್ ಶಿವಣ್ಣನ ಮುಂದೆಯೇ ‘ತಮಿಳಿನಿಂದ ಕನ್ನಡ ಹುಟ್ಟಿದೆ’ ಅಂತ ಹೇಳೋ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಸಿನಿಮಾ ಥಗ್‌ ಲೈಪ್‌ ಆಡಿಯೋ ಲಾಂಚ್‌ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ನಮ್ಮ ಕನ್ನಡ ಭಾಷೆಗೆ ನಟ ಕಮಲ್ ಹಾಸನ್‌ ಅವಮಾನಿಸಿದ್ದಾರೆ. ಇನ್ನೂ ಈ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್‌ ತಂಗಡಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ಸಚಿವರ ಪತ್ರದಲ್ಲಿ ಏನಿದೆ?
ತಮಿಳು ಚಿತ್ರರಂಗದ ನಟ ಕಮಲ್ ಹಾಸನ್ ಅವರು ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಕನ್ನಡ ಭಾಷೆಯ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಕನ್ನಡ ಭಾಷೆಯ ಕುರಿತಾಗಿ ಮಾತನಾಡಿರುವುದು ಕನ್ನಡಿಗರಿಗೆ ಹಾಗೂ ನನಗೆ ತೀವ್ರ ನೋವಾಗಿದೆ. ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟಾಗಿದೆ.

ಕಮಲ್ ಹಾಸನ್ ಅವರು ಓರ್ವ ಹಿರಿಯ ನಟರಾಗಿ ಕನ್ನಡ ಭಾಷೆಯ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಭಾಷೆಯ ಬಗೆ, ತಿಳಿದವರಾಗಿದ್ದು, ಈ ರೀತಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ. ಕನ್ನಡದ ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ಯಾರೇ, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರಿಂದ ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ.

ಆದ್ದರಿಂದ ಕಮಲ್ ಹಾಸನ್ ಅವರು ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು. ಕಮಲ್ ಹಾಸನ್ ಅವರು ರಾಜ್ಯದ ಜನರು/ ಕನ್ನಡಿಗರ ಕ್ಷಮೆಯಾಚಿಸದಿದ್ದಲ್ಲಿ ಅವರು ನಟಿಸಿರುವ ಚಲನ ಚಿತ್ರಗಳಿಗೆ ಕರ್ನಾಟಕದಲ್ಲಿ ಕೂಡಲೇ ನಿರ್ಬಂಧ ವಿಧಿಸಬೇಕೆಂದು ಈ ಮೂಲಕ ತಿಳಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!