HomeDharwadಮತ ಎಣಿಕೆ ನಿಮಿತ್ತ ಮದ್ಯ ಮಾರಾಟ ನಿಷೇಧ

ಮತ ಎಣಿಕೆ ನಿಮಿತ್ತ ಮದ್ಯ ಮಾರಾಟ ನಿಷೇಧ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜೂನ್ 4ರಂದು ಮತ ಎಣಿಕೆ ಕಾರ್ಯ ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 3ರ ಮಧ್ಯರಾತ್ರಿಯಿಂದ ಜೂನ್ 4ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಸಂಗ್ರಹಣೆಯನ್ನು ನಿಷೇಧಿಸಿ, ಶುಷ್ಕ ದಿವಸಗಳೆಂದು ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.

ಧಾರವಾಡ ಜಿಲ್ಲೆಯ ಎಲ್ಲ ವಿಧಾನಸಭಾ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

ಆದೇಶ ಜಾರಿ ಸಮಯದಲ್ಲಿ ಯಾವತ್ತೂ ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳು, ಬಿಯರ್ ಬಾರ್‌ಗಳು, ಕ್ಲಬ್‌ಗಳು, ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನಸ್ಪೆಕ್ಟರ್‌ರು, ಉಪವಿಭಾಗದ ಅಬಕಾರಿ ಅಧೀಕ್ಷಕರು ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅವರು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img