ಬೆಂಗಳೂರು:- ಪಾದಚಾರಿಗಳ ಸಾವಿನ ಸಂಖ್ಯೆಯಲ್ಲೂ ಬೆಂಗಳೂರು ಅಗ್ರಸ್ಥಾನವನ್ನು ಪಡೆದುಕೊಂಡಿದೆ.
ಈ ಆಘಾತಕಾರಿ ಮಾಹಿತಿಯನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ತಿಳಿಸಿದೆ. 2023 ರಲ್ಲಿ ಬೆಂಗಳೂರಿನಲ್ಲಿ 292 ಪಾದಚಾರಿ ಸಾವುಗಳು ದಾಖಲಾಗಿವೆ, ಇದು ಭಾರತದ 53 ಪ್ರಮುಖ ನಗರಗಳಲ್ಲಿ ಸಂಭವಿಸಿದ ಸಾವುಗಳಲ್ಲಿ ಶೇಕಡಾ 9.48 ರಷ್ಟಿದೆ ಎಂದು ಹೇಳಲಾಗಿದೆ. ಇದೀಗ ಈ ವರದಿ ಪ್ರಕಾರ ಬೆಂಗಳೂರು ಅತಿ ಹೆಚ್ಚು ಪಾದಚಾರಿಗಳ ಸಾವಿನ ನಗರವಾಗಿದೆ. ಇದು ರಸ್ತೆಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸುವ ಅಗತ್ಯ ಇದೆ ಎಂಬುದನ್ನು ಹೇಳುತ್ತದೆ.
ಸಂಚಾರ ಪೊಲೀಸರು ಪಾದಚಾರಿಗಳ ಸಾವಿನ ಸಂಖ್ಯೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆ, ಕಳಪೆ ಲೇನ್ ಶಿಸ್ತು, ಮೂಲಸೌಕರ್ಯ ಕೊರತೆಗಳು ಮತ್ತು ಹೆಚ್ಚುತ್ತಿರುವ ಅಪಘಾತ ಇದರಿಂದ ಈ ಸಂಖ್ಯೆ ಏರಿಕೆಯಾಗುತ್ತಿದೆ. ಬೆಂಗಳೂರಿನ ನಂತರ, ಅಹಮದಾಬಾದ್ (236) ಮತ್ತು ಜೈಪುರ (201) ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.ರಾಜ್ಯ ಮಟ್ಟದಲ್ಲಿ, ಕರ್ನಾಟಕವು 2,386 ಪಾದಚಾರಿ ಸಾವುಗಳನ್ನು ದಾಖಲಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರನೇ ಸ್ಥಾನದಲ್ಲಿದೆ, ಬಿಹಾರ (3,462) ಮತ್ತು ತಮಿಳುನಾಡು (4,577) ನಂತರದ ಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ.