ಬೆಂಗಳೂರು:- ಬೆಂಗಳೂರಿನಲ್ಲಿ ಇತ್ತೀಚೆಗೆ ನೂತನವಾಗಿ ಉದ್ಘಾಟನೆಗೊಂಡ ಡಬಲ್ ಡೆಕ್ಕರ್ ಮೇಲ್ಸೇತುವೆ ಮೇಲೆ ಬೆಂಗಳೂರು ಕಮಿಷನರ್ ಬಿ ದಯಾನಂದ ಬೈಕ್ ರೈಡ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಕಳೆದವಾರ ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ಡಬಲ್ ಡೆಕ್ಕರ್ ಫ್ಲೈಓವರ್ನಲ್ಲಿ ಕಾರು ಡ್ರೈವ್ ಮಾಡಿಕೊಂಡು ಹೋಗುವ ಮೂಲಕ ಸಂಚಾರಕ್ಕೆ ಚಾಲನೆ ನೀಡಿದ್ದರು. ಈ ಡಬಲ್ ಡೆಕ್ಕರ್ ಫ್ಲೈಓವರ್ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಬೈಕ್ ಚಲಾಯಿಸಿದರು. ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ವರೆಗೆ ರಾಯಲ್ ಎನ್ ಫೀಲ್ಡ್ ಬೈಕ್ ಚಲಾಯಿಸಿದರು. ಬೈಕ್ ಚಾಲನೆಯ ಅನುಭವವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಅತ್ಯಂತ ಸುಗಮ ಮತ್ತು ಸುಲಲಿತ ಪ್ರಯಾಣ” ಎಂದು ಟ್ವೀಟ್ ಮಾಡಿದ್ದಾರೆ.



