ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಮಲ್ಲಸಂದ್ರ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದರು. ಬಳಿಕ ನಾಲ್ಕೈದು ಕ್ಯಾಮೆರಾ ಅಳವಡಿಸಿ ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು.
Advertisement
ಈ ಪ್ರದೇಶದಲ್ಲಿ ಬೋನ್ ಅಳವಡಿಸಿದ ಅರಣ್ಯ ಸಿಬ್ಬಂದಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಕಾರ್ಯಾಚರಣೆ ಶುರು ಮಾಡಿದ್ದರು. ಅಲ್ಲಿಯವರೆಗೂ ಚಿರತೆ ಕಾಣಿಸಿಕೊಂಡಿರಲಿಲ್ಲ. ಬಳಿಕ ರಾತ್ರಿಯಾದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆಯಿಂದಲೇ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.