ಬೆಂಗಳೂರು:- 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಆರೋಪದಡಿ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರಿನ ನಾರಾಯಣ ಇ-ಸ್ಕೂಲ್ನ ಪಿಟಿ ಶಿಕ್ಷಕ ರಾಜೇಶ್ ಎನ್ನುವರ ವಿರುದ್ಧ ಆರೋಪ ಕೇಳಿಬಂದಿದ್ದು, FIR ದಾಖಲಿಸಿ, ಬೆಂಗಳೂರಿನ ಹುಳಿಮಾವು ಪೊಲೀಸರು, ಶಿಕ್ಷಕ ರಾಜೇಶ್ ಅವರನ್ನು ಬಂಧಿಸಿದ್ದಾರೆ.
ಶಿಕ್ಷಕ ರಾಜೇಶ್ ಸ್ಟಾಫ್ ರೂಮ್ನಲ್ಲಿ ಶಿಕ್ಷಕರ ಮುಂದೆ ವಿದ್ಯಾರ್ಥಿ ಕೆನ್ನೆಗೆ ಬಾರಿಸಿದ್ದು, ಹೊಡೆದ ಏಟಿಗೆ ವಿದ್ಯಾರ್ಥಿಯ ಕೆನ್ನೆ ಊದಿಕೊಂಡಿದೆ. ಇದರಿಂದ ಬಾಲಕ ಮನೆಗೆ ಹೋಗಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ಕೂಡಲೇ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹುಳಿಮಾವು ಠಾಣೆಯಲ್ಲಿ ಶಿಕ್ಷಕ ರಾಜೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾರೆ.


