ಬಾಂಗ್ಲಾ ಉಗ್ರನಿಗೆ 7 ವರ್ಷ ಕಠಿಣ ಶಿಕ್ಷೆ: ಬೆಂಗಳೂರು ಎನ್​ಐಎ ವಿಶೇಷ ನ್ಯಾಯಾಲಯ ಆದೇಶ!

0
Spread the love

ಬೆಂಗಳೂರು:- ಬಾಂಗ್ಲಾ ಉಗ್ರನಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ಬೆಂಗಳೂರು ಎನ್​ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಜಮಾತ್ ಉಲ್ ಉಗ್ರ ಸಂಘಟನೆಯ ಕೃತ್ಯಗಳಿಗೆ ಭಾರತದಲ್ಲಿ ಉತ್ತೇಜನ ನೀಡಿದ ಪ್ರಕರಣಗಳಲ್ಲಿ ಬಾಂಗ್ಲಾದೇಶ ಪ್ರಜೆ ಜಾಹಿದುಲ್ ಇಸ್ಲಾಂ ಅಲಿಯಾಸ್ ಕೌಸರ್ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಡಕಾಯಿತಿ, ಪಿತೂರಿ, ಭಯೋತ್ಪಾದನೆಗೆ ನಿಧಿ ಸಂಗ್ರಹ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ 57,000 ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ ಶಿಕ್ಷೆಯಾದಂತಾಗಿದೆ.

ಎನ್‌ಐಎ ತನಿಖೆಯಲ್ಲಿ ದೊರೆತ ಮಾಹಿತಿಯ ಪ್ರಕಾರ, 2005ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರ ವಶದಲ್ಲಿದ್ದ ಜಾಹಿದುಲ್, 2014ರಲ್ಲಿ ಜೆಎಂಬಿ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜೊತೆಗೆ ಪರಾರಿಯಾಗಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ. ಅದೇ ಸಂದರ್ಭದಲ್ಲಿ 2014 ರ ಬುರ್ದ್ವಾನ್ ಸ್ಫೋಟ ಪ್ರಕರಣದಲ್ಲಿ ಶಾಮೀಲಾಗಿದ್ದ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here