ಬೆಂಗಳೂರು: ತನ್ನದೇ ಫ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿವೇಕ್ ಸಮದರ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯೋಗಿಯಾಗಿದ್ದು, ಐಸಿಐಐಸಿಐ ಬ್ಯಾಂಕ್ ನಲ್ಲಿಲೋನ್ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡ್ತಿದ್ದನು.
ಇತ್ತೀಚೆಗೆ ಮೇಲಾಧಿಕಾರಿಯಿಂದ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದ ವಿವೇಕ್ ಸಮದರ್ಶಿ, ತನಗೆ ನಡೀತಿರೋ ಕಿರುಕುಳದ ಬಗ್ಗೆ ಪತ್ನಿಗೆ ಹೇಳಿಕೊಂಡಿದ್ದನು. ಅದಲ್ಲದೆ ವಿಡಿಯೋ ಕಾಲ್ ನಲ್ಲಿದ್ದುಕೊಂಡೇ ನೇಣಿಗೆ ಶರಣಾಗಿದ್ದು,
ಕೂಡಲೇ ಪತ್ನಿ ವಿವೇಕ್ ಸ್ನೇಹಿತರಿಗೆ ತಿಳಿಸಿದ್ದರು. ಇನ್ನೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸ್ರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.