ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಬ್ಯಾಂಕ್ ಉದ್ಯೋಗಿ ಸೂಸೈಡ್ ಮಾಡಿಕೊಂಡಿರುವ ಘಟನೆ ಜರುಗಿದೆ.
Advertisement
ಮನೋಜ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಮೃತ ಮನೋಜ್, ತಾನು ಕೆಲಸ ಮಾಡ್ತಿದ್ದ ಬ್ಯಾಂಕ್ ನಿಂದ ಲೋನ್ ಪಡೆದು ಬೆಟ್ಟಿಂಗ್ ಆಡ್ತಿದ್ನಂತೆ. ಬೆಟ್ಚಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದು,
ಇದರಿಂದ ಮನೋಜ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ಸದ್ಯ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.