ಪಾಟ್ನಾ: ಪಾಟ್ನಾದಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಸಾವಿನ ಸುತ್ತ ಕೆಲವು ಗಂಭೀರ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ದೃಢಪಟ್ಟಿಲ್ಲ.
ಅಭಿಷೇಕ್ ತನ್ನ ಪತ್ನಿಯೊಂದಿಗೆ ಪಾರ್ಟಿಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಪಾರ್ಟಿ ನಂತರ ಅವರ ಪತ್ನಿ ಮನೆಗೆ ಮರಳಿದರು, ಆದರೆ ಅಭಿಷೇಕ್ ನಂತರ ಬರುವುದಾಗಿ ಹೇಳಿದ್ದರು. ಅಂದಿನಿಂದ ಅವರ ಯಾವುದೇ ಸುಳಿವು ಸಿಕ್ಕಿಲ್ಲ.
ಅಭಿಷೇಕ್ ಅವರ ಸಹೋದರ ಹೇಳುವಂತೆ, ಬೆಳಗಿನ ಜಾವ 2.45 ರ ಸುಮಾರಿಗೆ ಅಭಿಷೇಕ್ ತನ್ನ ಪತ್ನಿಗೆ ಕರೆ ಮಾಡಿ ತನಗೆ ಅಪಘಾತವಾಗಿದೆ ಎಂದು ಹೇಳಿದ್ದ. ಆದರೆ ಸ್ವಲ್ಪ ಸಮಯದ ನಂತರ ಅವನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಅವನು ಹಿಂತಿರುಗದಿದ್ದಾಗ,
ಅವನ ಪತ್ನಿ ಬೆಳಗ್ಗೆ ಕಂಕರ್‌ಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆಯ ಸಮಯದಲ್ಲಿ, ಅಭಿಷೇಕ್ ಮೊಬೈಲ್ ಇದ್ದ ಕೊನೆಯ ಸ್ಥಳವು ಬೇವೂರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಪತ್ತೆಯಾಗಿತ್ತು. ಇದೀಗ ಅವರ ಶವ ಪತ್ತೆಯಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.