ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದಾರೆ.
ಈ ಔತಣಕೂಟ ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗೊಂದಲದ ನಡುವೆ ಆಯೋಜನೆಯಾಗಿದೆ. ಪಕ್ಷದೊಳಗಿನ ಕೆಲವರಲ್ಲಿ “ಡಿಕೆಶಿ ಅಧ್ಯಕ್ಷ ಸ್ಥಾನದಿಂದ ಇಳಿಯುವ ಬಗ್ಗೆಯೂ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಡಿನ್ನರ್ ಮೀಟಿಂಗ್ ಸಾಕಷ್ಟು ಕುತೂಹಲ ಮೂಡಿಸಿದೆ.
ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, “ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ.
ಮುಂದಿನ ದಿನಗಳಲ್ಲಿ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕೂಡ ಭೋಜನಕೂಟ ಹಮ್ಮಿಕೊಳ್ಳಲಾಗುವುದು. ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಈ ಭೋಜನಕೂಟವನ್ನು ನೀಡಿದ್ದೇವೆ” ಎಂದು ಹೇಳಿದರು.



