ಬೆಂಗಳೂರು: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ಇದರ ಬೆನ್ನಲ್ಲೇ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ಇದು ಜೀವದ ವಿಚಾರ.
Advertisement
ನನ್ನ ರಾಜೀನಾಮೆಯಿಂದ ಸರಿಯಾಗುತ್ತೆ ಅಂದರೆ ರಾಜೀನಾಮೆಗೂ ಸಿದ್ಧ. ಆದರೆ ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಕ್ರಮ ತೆಗೆದುಕೊಳ್ಳಲೇಬೇಕು. ಇಲ್ಲಿಯವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಅಂತ ಹೇಳಿದ್ದೇವೆ. ಇಂತಹ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು ಎಂದು ಹೇಳಿದ್ದಾರೆ.