ಬಾಣಂತಿಯರ ಸರಣಿ ಸಾವು ಪ್ರಕರಣ: ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು!

0
Spread the love

ಬೆಂಗಳೂರು:- ಇತ್ತೀಚೆಗೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಸರಣಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಕರ್ನಾಟಕ ಜನತೆಯನ್ನೇ ಬೆಚ್ಚಿ ಬೀಳಿಸಿದ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಗ್ಗೆಯಷ್ಟೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಐವರು ಬಾಣಂತಿಯರ ಸಾವಿನ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಘಟನೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.

ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಗೆ ತನಿಖೆ ನಡೆಸುವ ಹೊಣೆ ನೀಡಲಾಗಿದೆ. ಸರ್ಚ್ ವಾರೆಂಟ್ ಪಡೆದು ಘಟನೆ ನಡೆದ ಆಸ್ಪತ್ರೆ, ಔಷಧ ಉಗ್ರಾಣ ತಪಾಸಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here