ಫ್ಯಾಮಿಲಿ ಪ್ಲ್ಯಾನಿಂಗ್ ತಂದ ಆಪತ್ತು: ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಣಂತಿ ಸಾವು!

0
Spread the love

ಮಡಿಕೇರಿ:- ಫ್ಯಾಮಿಲಿ ಪ್ಲ್ಯಾನಿಂಗ್‌ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿದೆ.

Advertisement

ಎರಡೇ ಮಕ್ಕಳು ಸಾಕು ಇನ್ಮುಂದೆ ಮಕ್ಕಳು ಮಾಡಿಕೊಳ್ಳೋದು ಬೇಡವೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯೊಬ್ಬರು ಆಪರೇಷನ್ ಥಿಯೆಟರ್‌ಗೆ ಹೋಗಿದ್ದ ವೇಳೆ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

27 ವರ್ಷದ ಶಾಂತಿ ಮೃತಪಟ್ಟ ಬಾಣಂತಿ. ಶಾಂತಿ ಅವರು, ಮಂಗಳವಾರ ತಮ್ಮ ಗಂಡ ಹಾಗೂ 2 ತಿಂಗಳು 10 ದಿನದ ಮಗುವಿನೊಂದಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗಮಿಸಿದ್ದಾರೆ. ಲ್ಯಾಪ್ರೊಸ್ಕೋಪಿ ಎಂಬ ಶಸ್ತ್ರಚಿಕಿತ್ಸೆಯಾಗುತ್ತಿದ್ದ ಹಿನ್ನೆಲೆ ಫ್ಯಾಮಿಲಿ ಪ್ಲ್ಯಾನಿಂಗ್‌ ಮಾಡಿಸಲು ಮುಂದಾಗಿದ್ದಾರೆ. ಇದೇ ದಿನ ಸುಮಾರು 14 ಬಾಣಂತಿಯರು ಫ್ಯಾಮಿಲಿ ಪ್ಲ್ಯಾನಿಂಗ್‌ಗೆ ನೋಂದಣಿ ಮಾಡಿಕೊಂಡಿದ್ದಾರೆ.

ಮಂಗಳವಾರ ಬೆಳಗ್ಗೆ ಆಪರೇಷನ್ ಮಾಡಿಸಲು ಶಾಂತಿ ಅವರು ಮುಂದಾದ ವೇಳೆ ಅಸ್ವಸ್ಥತೆಯಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ವೈದ್ಯಾಧಿಕಾರಿಗಳು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲು ಮುಂದಾಗಿದ್ದಾರೆ. ಬಾಣಂತಿ ಮಹಿಳೆ ಶಾಂತಿಯನ್ನು ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here